ಡಿವಿಜಿ ಸುದ್ದಿ, ಮಂಗಳೂರು : ನಗರದಲ್ಲಿ ನವೆಂಬರ್ 5 ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನ.5 ರಂದು ನಗರದ ಟಿವಿ ರಮಣ ಪೈ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.



