Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಪ್ರವಾಸ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ.14 ರಂದು ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.14 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10.50ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು. ಬೆಳಿಗ್ಗೆ 11.15 ಕ್ಕೆ ರಸ್ತೆ ಮೂಲಕ ಹರಿಹರ ತಲುಪಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳ ಪೀಠದಲ್ಲಿ ಹರಜಾತ್ರಾ ಮಹೋತ್ಸವ-2021 ರ ಅಂಗವಾಗಿ ಪೀಠದ ವತಿಯಿಂದ ಆಯೋಜಿಸಲಾಗಿರುವ ಸ್ವಾವಲಂಬಿ ಸಮಾವೇಶ-ಸಂಕ್ರಾಂತಿ ಸಂಭ್ರಮ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12.15 ಕ್ಕೆ ಹರಿಹರದಿಂದ ರಸ್ತೆ ಮೂಲಕ ಹೊರಟು 12.30 ಕ್ಕೆ ಜಿಎಂಐಟಿ ಹೆಲಿಪ್ಯಾಡ್ ತಲುಪುವರು. 12.35 ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2 ಕ್ಕೆ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು ಎಂದು ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});