ಬೆಂಗಳೂರು: ಕೊರೊನಾ ಎರಡನೆ ಅಲೆ ಹಿನ್ನೆಲೆ ಒಂದರಿಂದ ಒಂಬತ್ತನೆ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ವರ್ಷವೂ ಕೂಡ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಿ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಂತಿಮವಾಗಿ ತಿಳಿಸಲಾಗುವುದು ಎಂದ್ರು.
ರೂಪಾಂತರಿ ಸೋಂಕು ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ಖಚಿತ. ಈಗಿನ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಬಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗೂ ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ ಎಂದರು.



