ನವದೆಹಲಿ: ದೇಶದಾದ್ಯಂತ ಒಂದೇ ದಿನದ ಅವಧಿಯಲ್ಲಿ 78,524 ಪಾಸಿಟಿವ್ ಪತ್ತೆಯಾಗಿದ್ದು, 971 ಸೋಂಕಿತರು ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಸೋಂಕಿತರ ಸಂಖ್ಯೆ 68,35,656ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,05,526 ಮಂದಿ ಮೃತಪಟ್ಟಿದ್ದಾರೆ. ಗುಣಮುಖರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈವರೆಗೆ 58,27,705 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಇದುವರೆಗೆ 14.7 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, 38,717 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ 7.29 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈವರೆಗೆ 6,052 ಮಂದಿ ಕೊನೆಯುಸಿರೆಳೆದಿದ್ದಾರೆ. ತಮಿಳುನಾಡಿನಲ್ಲಿ 6.30 ಲಕ್ಷ ಸೋಂಕು ಪತ್ತೆಯಾಗಿದ್ದು, ಆ ಪೈಕಿ 9,917 ಮಂದಿ ಮೃತಪಟ್ಟಿದ್ದಾರೆ.ಕರ್ನಾಟಕದಲ್ಲಿ 68,652ಕ್ಕೆ ಮಂದಿಗೆ ಸೋಂಕು ಪತ್ತೆಯಾಗಿದೆ.



