Connect with us

Dvgsuddi Kannada | online news portal | Kannada news online

ಡಿಸೆಂಬರ್ 01 ರಿಂದ ಕೊರೊನಾ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯ ಸುದ್ದಿ

ಡಿಸೆಂಬರ್ 01 ರಿಂದ ಕೊರೊನಾ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೇಂದ್ರ ಸರ್ಕಾರ ಪ್ರಕಟಿಸಿರುವ ಆನ್‌ಲಾಕ್‌ 6 ಮಾರ್ಗಸೂಚಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಡಿಸೆಂಬರ್ 31 ವರೆಗೆ ಹೊಸ ಮಾರ್ಗ ಸೂಚಿ  ಜಾರಿಯಲ್ಲಿರುತ್ತದೆ. ಮಾರ್ಗಸೂಚಿಯಲ್ಲಿ ಕೊರೊನಾ ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಸೂಚಿಸಲಾಗಿದೆ.

ಕಂಟೇನ್ಮೆಂಟ್ ವಲಯದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವುದು, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ರಾತ್ರಿ ಕಫ್ರ್ಯೂನಂತಹ ಸ್ಥಳೀಯ ನಿರ್ಬಂಧಗಳನ್ನು ವಿಧಿಸಬಹುದು. ಆದರೆ, ಕಂಟೇನ್ಮೆಂಟ್ ವಲಯಗಳ ಹೊರಗೆ ಯಾವುದೇ ಲಾಕ್ಡೌನ್ ವಿಧಿಸಲು ರಾಜ್ಯ ಸರ್ಕಾರದ ಅನುಮತಿ ಅತ್ಯಗತ್ಯ ಎಂದು ತಿಳಿಸಲಾಗಿದೆ.

ಶೇ.50ರಷ್ಟು ಸಾಮರ್ಥ್ಯದೊಂದಿಗೆ  ಪ್ರಯಾಣಿಕರ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ- ಕ್ರೀಡಾಪಟುಗಳ ತರಬೇತಿಗಾಗಿ ಈಜುಕೊಳಗಳ ಬಳಕೆ- ಚಿತ್ರಮಂದಿರಗಳು, ಸಿನಿಮಾ ಹಾಲ್‍ಗಳಿಗೆ ಅನುಮತಿ- ಸಾಮಾಜಿಕ, ಧಾರ್ಮಿಕ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಭೆಗಳನ್ನು ನಡೆಸಬಹುದು. ಜನರು ಮತ್ತು ಸರಕುಗಳ ಅಂತರ್-ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಪ್ರತ್ಯೇಕ ಅನುಮೋದನೆ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top