ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.
ವಿಶ್ವ ಏಡ್ಸ್ ದಿನದ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ವಿಶ್ವದಲ್ಲಿ ಮತ್ತೆ ಕೊರೊನಾ ಸೋಂಕು ಹರಡುತ್ತಿದೆ. ಭಾರತದಲ್ಲಿ ಕೊರೊನಾ ನಿಯಂತ್ರಣ ಯಶಸ್ವಿಯಾಗಿ ನಡೆಯುತ್ತಿದೆ. ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 10 ಕೋಟಿ ಜನರಿಗೆ ಇದರ ಪ್ರಯೋಜನ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದ್ದಾರೆ ಎಂದರು.