ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ. ಜಿಲ್ಲೆಯಲ್ಲಿ 23 ಕೇಸ್ ಗಳು ಪತ್ತೆಯಾಗಿವೆ.124 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 22,695 ಮಂದಿಗೆ ಕೊರೊನಾ ಬಂದಿದ್ದು,22,307 ಮಂದಿ ಬಿಡುಗಡೆ ಹೊಂದಿದ್ದಾರೆ. 264 ಮಂದಿ ಮೃತಪಟ್ಟಿದ್ದಾರೆ.
52 ವಿದ್ಯಾರ್ಥಿಗಳು, 16 ಬೋಧಕ, 8 ಬೋಧಕೇತರ ಸಿಬ್ಬಂದಿ ಸೇರಿದಂತೆ ಮನೆಗಳ 10 ಪ್ರಾಥಮಿಕ ಸಂಪರ್ಕಿತರ ಗಂಟಲು ಮಾದರಿ ದ್ರವ ತೆಗೆದುಕೊಳ್ಳಲಾಗಿದೆ. ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚಲಾಗುತ್ತಿದೆ. ಮಾರ್ಗಸೂಚಿಗಳ ಅನುಸಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.



