ಹುಬ್ಬಳ್ಳಿ: ಕೊರೊನಾ ಸಂಕಷ್ಟ ಸ್ಥಿತಿಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಶೇ. 50 ರಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ನೀಡಿ ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಂ.ಬಿ.ಪಾಟೀಲರು ವಿಜಯಪುರದ ಬಿಎಲ್ ಡಿ ಆಸ್ಪತ್ರೆಯಲ್ಲಿ ಕಡಿಮೆ ಶುಲ್ಕದಲ್ಲಿ ಚಿಕಿತ್ಸೆ ನೀಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಇದೇ ರೀತಿ ಇತರೆ ಖಾಸಗಿ ಆಸ್ಪತ್ರೆಗಳು ಮುಂದೆ ಬರಬೇಕು. ಈ ಮೂಲಕ ಸಾಮಾಜಿಕ ಬದ್ದತೆ ಪ್ರದರ್ಶಿಸಲಿ ಎಂದು ಸೂಚಿಸಿದರು.
ಎಲ್ಲ ರಾಜ್ಯಗಳಿಗೆ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ ಸಹಕಾರ ನೀಡುತ್ತಿದೆ.ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಆಕ್ಸಿಜನ್ ನೀಡಲು ಕೇಂದ್ರ ಕ್ರಮ ಕೈಗೊಂಡಿದೆ. ವೈದ್ಯಕೀಯ ತಜ್ಞರ ಪ್ರಕಾರ ಕೋವಿಡ್ ಎರಡನೇ ಅಲೆ ಗಂಭೀರಗಿದ್ದು, ಜನರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದರು.



