Connect with us

Dvgsuddi Kannada | online news portal | Kannada news online

ಖಾಸಗಿ ಆಸ್ಪತ್ರೆಗಳು ಸಾಮಾಜಿಕ ಜವಾಬ್ದಾರಿಯಡಿ ಶೇ. 50ರಷ್ಟು ಕಡಿಮೆ ದರದಲ್ಲಿ ಕೊರೊನಾ ಚಿಕಿತ್ಸೆ ನೀಡಲಿ:ಸಚಿವ ಪ್ರಹ್ಲಾದ್ ಜೋಶಿ   

ಪ್ರಮುಖ ಸುದ್ದಿ

ಖಾಸಗಿ ಆಸ್ಪತ್ರೆಗಳು ಸಾಮಾಜಿಕ ಜವಾಬ್ದಾರಿಯಡಿ ಶೇ. 50ರಷ್ಟು ಕಡಿಮೆ ದರದಲ್ಲಿ ಕೊರೊನಾ ಚಿಕಿತ್ಸೆ ನೀಡಲಿ:ಸಚಿವ ಪ್ರಹ್ಲಾದ್ ಜೋಶಿ   

ಹುಬ್ಬಳ್ಳಿ: ಕೊರೊನಾ ಸಂಕಷ್ಟ ಸ್ಥಿತಿಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ  ಶೇ. 50 ರಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ನೀಡಿ  ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಂ.ಬಿ.ಪಾಟೀಲರು ವಿಜಯಪುರದ ಬಿಎಲ್ ಡಿ ಆಸ್ಪತ್ರೆಯಲ್ಲಿ ಕಡಿಮೆ ಶುಲ್ಕದಲ್ಲಿ ಚಿಕಿತ್ಸೆ  ನೀಡುವ ಮೂಲಕ ರಾಜ್ಯಕ್ಕೆ  ಮಾದರಿಯಾಗಿದ್ದಾರೆ. ಇದೇ ರೀತಿ ಇತರೆ ಖಾಸಗಿ ಆಸ್ಪತ್ರೆಗಳು ಮುಂದೆ ಬರಬೇಕು. ಈ ಮೂಲಕ  ಸಾಮಾಜಿಕ ಬದ್ದತೆ ಪ್ರದರ್ಶಿಸಲಿ ಎಂದು ಸೂಚಿಸಿದರು.

ಎಲ್ಲ ರಾಜ್ಯಗಳಿಗೆ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ  ಸಹಕಾರ ನೀಡುತ್ತಿದೆ.ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಆಕ್ಸಿಜನ್ ನೀಡಲು ಕೇಂದ್ರ ಕ್ರಮ ಕೈಗೊಂಡಿದೆ. ವೈದ್ಯಕೀಯ ತಜ್ಞರ ಪ್ರಕಾರ ಕೋವಿಡ್ ಎರಡನೇ ಅಲೆ ಗಂಭೀರಗಿದ್ದು, ಜನರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top