ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂದು 74 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15525ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ116 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 12484 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರೊನಾದಿಂದ ಯಾವುದೇ ಮೃತಪಟ್ಟ ಪ್ರಕ್ರರಣ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ 240 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 2801 ಸಕ್ರಿಯ ಪ್ರಕರಣಗಳಿವೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 07, ಹರಿಹರ 17, ಜಗಳೂರು 03, ಚನ್ನಗಿರಿ 01, ಹೊನ್ನಾಳಿ 42 ಹಾಗೂ ಇತರೆ ಜಿಲ್ಲೆಯಿಂದ 04 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ.



