ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿಸಿದ್ದು, ಒಂದೇ ದಿನ 79,476 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 1,069 ಮಂದಿ ಕೊರೊನಾ ವೈರಸ್ ಬಲಿಯಾಗಿದ್ದು, ಸಾವಿನ ಸಂಖ್ಯೆ 1,00,842 ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 64,73,545 ಕ್ಕೆ ಏರಿಕೆ ಆಗಿದೆ. ಇದರಲ್ಲಿ 9,44,996 ಸಕ್ರಿಯ ಪ್ರಕರಣಗಳಿದ್ದರೆ, 54,27,707 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲಿಯೂ ಕೊರೊನಾ ರಣಕೇಕೆ ಮುಂದುವರಿದಿದ್ದು, ನಿನ್ನೆ 8,793 ಕೊರೊನಾ ಪ್ರಕರಣಗಳು ಪತ್ತೆಯಾಗಿತ್ತು. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ. ಒಂದೇ ದಿನ 125 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೆ 9,119 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.



