ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 38,310 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 490 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 82,67,623ಕ್ಕೆ ಏರಿಕೆಯಾಗಿದೆ. ಒಟ್ಟು 1,23,097 ಸೋಂಕಿತರು ಸಾವನ್ನಪ್ಪಿದ್ದಾರೆ. 76,03,121 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 5,41,405 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ 1,19,352 ಸಕ್ರಿಯ ಪ್ರಕರಣಗಳಿದ್ದು, ಕರ್ನಾಟಕದಲ್ಲಿ 44,824 ಹಾಗೂ ದೆಹಲಿಯಲ್ಲಿ 33,308 ಸಕ್ರಿಯ ಪ್ರಕರಣಗಳಿವೆ ಎಂದೂ ಸಚಿವಾಲಯ ತಿಳಿಸಿದೆ.ಒಟ್ಟು ಕೊರೊನಾ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 6.83ರಷ್ಟಿದ್ದು, ಚೇತರಿಕೆ ದರ ಶೇ 91.68ರಷ್ಟಿದೆ.



