ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ 8,477 ಮಂದಿಗೆ ಸೋಂಕು ಪತ್ತೆಯಾಗಿದೆ. ಆಸ್ಪತ್ರೆಯಿಂದ 8,841 ಮಂದಿ ಬಿಡುಗಡೆಯಾಗಿದ್ದು, 85 ಮಂದಿ ಮೃತಪಟ್ಟಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆಯಾಗಿದೆ. ಈ ಪೈಕಿ 6,20,008 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,13,538 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 10,283 ಮಂದಿ ಮೃತಪಟ್ಟಿದ್ದು, 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 3,788 , ಬೆಂಗಳೂರು ಗ್ರಾಮಾಂರ 454, ಹಾಸನ 440, ಮೈಸೂರು 303, ಬೆಳಗಾವಿ 303, ದಕ್ಷಿಣ ಕನ್ನಡ 301 ಮಂದಿಗೆ ಸೋಂಕು ಪತ್ತೆಯಾಗಿದೆ.



