ಬೆಂಗಳೂರು: ರಾಜ್ಯದಲ್ಲಿ ಇಂದು 1,280 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,95,284ಕ್ಕೆ ಏರಿಕೆಯಾಗಿದೆ.ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,880 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1060 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,58,370 ಏರಿಕೆಯಾಗಿದೆ. ಇನ್ನು 25,015 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 638 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,75,163ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,197 ಮಂದಿ ಬಲಿಯಾಗಿದ್ದಾರೆ.



