ಡಿವಿಜಿ ಸುದ್ದಿ, ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮೂಲಕ ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಕಾರಣ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಮಾಡಿಸಿದ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ
ನಾನು ಆರೋಗ್ಯವಾಗಿದ್ದೆನೆಂದು ಹೇಳಲು ಬಯಸುತ್ತೇನೆ pic.twitter.com/1mPNR3Pc2v
— M P Renukacharya (@MPRBJP) September 29, 2020



