ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಕೇಸ್ ಗಳ ಸಂಖ್ಯೆ ಏರಿಕೆಯಾಗಿದ್ದು, ಶನಿವಾರ 49 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 22 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 22,877ಕ್ಕೆ ಏರಿಕೆಯಾಗಿದ್ದು, 22,383 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 264 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, 230 ಸಕ್ರಿಯ ಕೇಸ್ ಗಳಿವೆ.