ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗ ಮುಂದೂಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗ ಸಭೆ ಬಳಿಕ ಮಾತನಾಡಿ, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು15-20 ದಿನಗಳ ಮುನ್ನ ಪ್ರಕಟಿಸಲಾಗುವುದು. ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಿ ಎಂದರು.
ಇನ್ನು ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ ನಡೆಸಲಾಗುವುದು. ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ ಈ ಬಾರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು. ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.



