ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 8,626 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 179 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಸೋಂಕಿತರ ಸಂಖ್ಯೆ 5,02,982ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಒಟ್ಟು 7,808 ಮಂದಿ ಸಾವನ್ನಪ್ಪಿದ್ದಾರೆ.
ಇಂದು 10,949 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓಟ್ಟು 3,94,026 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,01,129 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 3,623 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 37 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 600, ಉಡುಪಿ 493, ದಕ್ಷಿಣ ಕನ್ನಡ 456, ಬಳ್ಳಾರಿ 296, ಶಿವಮೊಗ್ಗ 257, ಬೆಳಗಾವಿ 221, ತುಮಕೂರು ಜಿಲ್ಲೆಯಲ್ಲಿ 208 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.