Connect with us

Dvgsuddi Kannada | online news portal | Kannada news online

ಚಿತ್ರದುರ್ಗ: ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ, ಸೋಂಕಿತರ ಸಂಖ್ಯೆ 13,435ಕ್ಕೆ ಏರಿಕೆ

ಜಿಲ್ಲಾ ಸುದ್ದಿ

ಚಿತ್ರದುರ್ಗ: ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ, ಸೋಂಕಿತರ ಸಂಖ್ಯೆ 13,435ಕ್ಕೆ ಏರಿಕೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 36 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,435 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬುಧವಾರ ಒಟ್ಟು 1847 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 36 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 13,435 ಕ್ಕೆ ಏರಿಕೆಯಾಗಿದೆ. ಒಟ್ಟು 64 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 13,083 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 287 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,08,797 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,57,629 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,42,841 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 856 ಜನರ ವರದಿ ಬರುವುದು ಬಾಕಿ ಇದೆ. 497 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top