Connect with us

Dvgsuddi Kannada | online news portal | Kannada news online

ಕೊರೊನಾದಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚನೆ  

ಪ್ರಮುಖ ಸುದ್ದಿ

ಕೊರೊನಾದಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚನೆ  

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 1 ಲಕ್ಷ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗಳಿಗೆ  ಸರ್ಕಾರ ಆದೇಶ ನೀಡಿದೆ.

ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟಂಬಕ್ಕೆ 1 ರೂ ಲಕ್ಷ ಪರಿಹಾರ ನೀಡುವುದಾಗಿ  ರಾಜ್ಯದ ನಿಕಟಪೂರ್ವ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದರು. ಇದೀಗ ಸರ್ಕಾರ ಸೆ. 23 ರಂದು ಆದೇಶ ಹೊರಡಿಸಿದ್ದು, ಅರ್ಹ ಸಂತ್ರಸ್ತ ಕುಟುಂಬಕ್ಕೆ  ಪರಿಹಾರ ನೀಡಲು ಜಿಲ್ಲಾಧಿಕಾರಿಗೆ  ಸರ್ಕಾರ ಆದೇಶಿಸಿದೆ.

ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ  ವಾರಸುದಾರರಾಗಿದ್ದರೆ,  ಕೋವಿಡ್19 ಮರಣ ಪರಿಹಾರ ಧನವನ್ನು ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ ಪಿಡಿ ಖಾತೆಯಿಂದ ಚೆಕ್ ಮೂಲಕ ವಿತರಿಸಲು  ಆದೇಶ ಹೊರಡಿಸಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top