ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 39 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,534 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 31 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 1,958 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 39 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 13,534 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 64 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 13,182 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 287 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,09,711 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,63,314 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,48,637 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 644 ಜನರ ವರದಿ ಬರುವುದು ಬಾಕಿ ಇದೆ. 499 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.



