ಚಿತ್ರದುರ್ಗ: ರಾಜ್ಯಾದ್ಯಂತ ನ. 17ರಿಂದ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೋವಿಡ್ ಟೆಸ್ಟ್ ಗಾಗಿ ವಿದ್ಯಾರ್ಥಿಗಳು ಅಲೆದಾಟ ನಡೆಸುತ್ತಿದ್ದಾರೆ. ಪದವಿ, ಸ್ನಾತಕೋತ್ತರ, ದಿಪ್ಲೋಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 3 ದಿನಗಳಿಂದ ಕೋವಿಡ್ ಟೆಸ್ಟ್ ಗಾಗಿ ವಿದ್ಯಾರ್ಥಿಗಳು ಅಲೆದಾಟ ನಡೆಸುತ್ತಿದ್ದಾರೆ.
ಕೋವಿಡ್ ನೆಗೆಟಿವ್ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಿರುವುದರಿಂದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಗಾಗಿ ಅಲೆದಾಡುತ್ತಿದ್ದಾರೆ. ಟೆಸ್ಟ್ ಮಾಡಿಸಲು ಸೂಕ್ತ ಸ್ಥಳದ ಮಾಹಿತಿ ದೊರಕದೆ ಇಡಿ ಜಿಲ್ಲಾಸ್ಪತ್ರೆ ಸುತ್ತುತ್ತಿದ್ದಾರೆ. ಸಿಬ್ಬಂದಿ ಕೋವಿಡ್ ಟೆಸ್ಟ್ ನಡೆಸಲು ವಿಳಂಬ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬನ್ನಿ, ನಾಳೆ ಬನ್ನಿ ಎಂದು ಕಳುಹಿಸಿತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬೇಸರ ಹೊರ ಹಾಕುತ್ತಿದ್ದಾರೆ.