ನವದೆಹಲಿ : ಮುಂಬೈ ವಿಮಾನ ನಿಲ್ದಾಣದ ಬಳಿಯ ಮುಂಬೈ ಡ್ರ್ಯಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು, ಹಿರಿಯ ಕ್ರಿಕೆಟರ್ ಸುರೇಶ್ ರೈನಾ ಮತ್ತು ಗಾಯಕ ಗುರು ರಾಂಡವಾ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಜಾಮೀನಿನ ಮೇಲೆ ಇಬ್ಬರನ್ನೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದಾಳಿಯಲ್ಲಿ ಮುಂಬೈ ಕ್ಲಬ್ ನ ಏಳು ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿಯನ್ನು ಬಂಧಿಸಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗಾಯಕ ಗುರು ರಾಂಡವಾ ಮತ್ತು ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹರ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.
ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಜನರ ವಿರುದ್ಧ ಸೆಕ್ಷನ್ 188 , 269 ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾಲಮಿತಿಯಾಚೆಗೆ ಸಂಸ್ಥೆಯನ್ನು ತೆರೆದಿಡಲು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸದೆ ಇರುವುದಕ್ಕಾಗಿ ಡ್ರ್ಯಾಗನ್ ಫ್ಲೈ ಪಬ್ ಮೇಲೆ ದಾಳಿ ನಡೆಸಿದ ನಂತರ ಈ ಬಂಧನಗಳನ್ನು ಮಾಡಲಾಗಿದೆ.



