ಡಿವಿಜಿ ಸುದ್ದಿ, ದಾವಣಗೆರೆ: ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಮನೂರಿನಿಂದ ಜೆಹೆಚ್ ಬಡಾವಣೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, 12 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರವರಾದ ಮುಸ್ತಾಕ್ ಅಹಮ್ಮದ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿತರಾದ ಬಳ್ಳಾರಿ ಜಿಲ್ಲೆಯ ರಾಮಸಾಗರ ಹಟ್ಟಿಯ ಬಸವರಾಜ ಬಿ (38 ವರ್ಷ) ನನ್ನು ಬಂಧಿಸಲಾಗಿದೆ.
ಬಂಧಿತನಿಂದ 12000 ರೂ ಬೆಲೆಯ 958 ಗ್ರಾಂ ಗಾಂಜಾ ಸೊಪ್ಪು ಹಾಗೂ ಕೇಸಿಗೆ ಸಂಬಂಧಿಸಿದ 300/-ರೂಪಾಯಿ ನಗದು ಜಪ್ತು ಪಡಿಸಿಕೊಂಡಿದ್ದು, ಆರೋಪಿತನ ವಿರುದ್ಧ ದಾವಣಗೆರೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.