ಡಿವಿಜಿ ಸುದ್ದಿ, ಹಾವೇರಿ : ಅಣ್ಣ-ತಮ್ಮನ ಜಗಳಾ ವಿಕೋಪಕ್ಕೆ ಹೋಗಿ, ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬುಡಪನಹಳ್ಳಿ ಗ್ರಾಮದ ನಾಗರಾಜ ಗೊರವರ(22) ಹತ್ಯೆಯಾದ ಯುವಕನಾಗಿದ್ದಾನೆ. ಈತನ ತಮ್ಮ ದಿಳ್ಳೆಪ್ಪ ಗೊರವರ (20) ಕೊಲೆ ಮಾಡಿದ್ದಾನೆ. ನಾಗರಾಜ ದಿನನಿತ್ಯ ಕುಡಿದು ಬಂದು ತಂದೆ-ತಾಯಿ ಜೊತೆ ಜಗಳವಾಡುತ್ತಿದ್ದನು. ಇದರಿಂದ ಜಗಳ ವಿಕೋಪಕ್ಕೆ ಹೋಗಿ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ ಅಣ್ಣನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ದಿಳ್ಳೆಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.