ಬೆಂಗಳೂರು : ಸ್ಪಾ, ಮಸಾಜ್ ಸೆಂಟರ್ ಗಳ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾತನಾಡಿ, ಕೋರಮಂಗಲ ಮತ್ತು ಬಸವೇಶ್ವರ ನಗರದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸ್ಪಾ ಮತ್ತು ಮಸಾಜ್ ಸೆಂಟರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಕೋರಮಂಗಲ ಮತ್ತು ಬಸವೇಶ್ವರ ನಗರದ ಮೂರು ಕಡೆ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದೆ ಎಂದು ಅವರು ಹೇಳಿದರು.
ಈ ಹಿಂದೆ ಡಿಸೆಂಬರ್ 9ರಂದು ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ್ದ ಸಿ.ಸಿ.ಬಿ. ಮಂಗಳವಾರ ರಾತ್ರಿ ಕೇಂದ್ರ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎರಡು ಕಡೆ ದಾಳಿ ನಡೆಸಿದ್ದಾರೆ.



