ಡಿವಿಜಿ ಸುದ್ದಿ, ಬೆಂಗಳೂರು: ನಗರದ ಬಸವನಪುರ ವಾರ್ಡ್ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಯ ಕೊಣೆಯಲ್ಲಿ ನೇಣು ಹಾಕಿಕೊಂಡು ಕೆಆರ್ ಪುರ ವಿಧಾನ ಸಭಾ ಕ್ಷೇತ್ರದ ಬಸವನಪುರ ವಾರ್ಡ್‍ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣರಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ಆತ್ಮಹತ್ಯೆಗೆ ಯಾವುದೇ ನಿಖರ ತಿಳಿದು ಬಂದಿಲ್ಲ.
ಇತ್ತೀಚೆಗಷ್ಟೇ ವಿನೋದಾ ಅಪೆಂಡಿಕ್ಸ್ ಆಪರೇಷನ್‍ಗೆ ಒಳಗಾಗಿದ್ದರು ಎನ್ನಲಾಗಿದೆ. ದಂಪತಿಗೆ ಮೂರು ವರ್ಷದ ಮಗುವಿದ್ದು, ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.



