Connect with us

Dvg Suddi-Kannada News

ದಾವಣಗೆರೆ: ಕ್ರೀಡಾಪಟುಗಳಿಗೆ ಕೊರೊನಾ ಲಸಿಕೆ

ದಾವಣಗೆರೆ

ದಾವಣಗೆರೆ: ಕ್ರೀಡಾಪಟುಗಳಿಗೆ ಕೊರೊನಾ ಲಸಿಕೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ 18 ರಿಂದ 44 ವರ್ಷದೊಳಗಿನ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್-19 ಲಸಿಕೆಯನ್ನು ಆದ್ಯತೆಯ ಮೇರೆಗೆ ಒದಗಿಸಲು ಆದೇಶಿಸಲಾಗಿದ್ದು, ಕ್ರೀಡಾಪಟುಗಳು ಅಗತ್ಯ ದಾಖಲಾತಿಗಳೊಂದಿಗೆ ಜೂ.18 ರೊಳಗಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಕೋವಿಡ್-19 ನಿರೋಧಕ ಲಸಿಕೆ ಹಾಕಿಸಿಕೊಳ್ಳಬಯಸುವ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳೊಂದಿಗೆ ಜೂ.18 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚÉೀರಿಗೆ ಹಾಜರಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಲಸಿಕೆ ನೀಡುವ ದಿನಾಂಕ ಮತ್ತು ಸ್ಥಳವನ್ನು ನಂತರ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top