ಬೆಂಗಳೂರು: ನಿವಾರ್ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ , ಚಿಕ್ಕಬಳ್ಳಾಪುರ, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಹಾಗೂ ಉತ್ತರ ಒಳನಾಡಿನಲ್ಲಿ ಮೂರು ದಿನ ಮಳೆಯಾಗಲಿದೆ.



