ದಾವಣಗೆರೆ: ನಗರದ ಪಿ.ಬಿ. ರಸ್ತೆಯ ಬಿ.ಎಸ್.ಎನ್.ಎಲ್ ಕಚೇರಿ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್ ರವರ ಪುತ್ಥಳಿ ಅನಾವರಣ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಶಾಸಕ ಎಸ್.ಎ.ರವೀಂದ್ರನಾಥ್, ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಧೂಡ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಮಾ ಪ್ರಕಾಶ್, ಧೂಡ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



