ದಾವಣಗೆರೆ: ಕರ್ನಾಟಕ ಸರ್ಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಅವರು ಮೇ.14 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಮೇ.14 ರಂದು ಬೆ.7.30ಕ್ಕೆ ಹುಬ್ಬಳಿಯಿಂದ ಹೊರಟು ಬೆ.9.30ಕ್ಕೆ ದಾವಣಗೆರೆಗೆ ಆಗಮಿಸುವರು, ನಂತರ ಬೆ.10.30 ಕ್ಕೆ ಹೋಟೆಲ್ ಪೂಜಾ ಇಂಟರ್ ನ್ಯಾಷನಲ್ ಪಿ.ಬಿ ರಸ್ತೆ ದಾವಣಗೆರೆ ಇಲ್ಲಿ ನಡೆಯುವ “ಅಮೃತ ಭಾರತಿಗೆ ಕನ್ನಡದಾರತಿ” ಅಭಿಯಾನದ ಸ್ವರೂಪವನ್ನು ಅಂತಿಮಗೊಳಿಸುವ ಸಭೆಯಲ್ಲಿ ಭಾಗವಹಿಸುವರು. ನಂತರ ಸ.05 ಕ್ಕೆ ಕಾರ್ಕಳಕ್ಕೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡುವರು ಎಂದು ಅವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀನಾಥ್ ಕೆ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



