ರಾಣೇಬೆನ್ನೂರು: ಭೀಕರ ಅಪಘಾತದಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ಗೀತಾ ದಾವಣಗೆರೆ ಮೂಲದ (34) ಮತ್ತು ಮಂಜುಳಾ (36) ಗುರುತಿಸಲಾಗಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ದಾವಣಗೆರೆಯಿಂದ ಕಾರವಾರಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಣೆಬೆನ್ನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



