ದಾವಣಗೆರೆ: ಪತಿ, ಅತ್ತೆ-ಮಾವರ ಕಿರುಕುಳ ತಾಳಲಾರದೆ ಗೃಹಿಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲ್ಲೂಕಿನ ಮೂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಶಾ (30) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ.
ಪತಿ ನಾಗರಾಜ, ಅತ್ತೆ ನಿಂಗಮ್ಮ, ಮಾವ ಮಂಜಪ್ಪ ಸೇರಿಕೊಂಡು ಪ್ರತಿ ದಿನ ಮಾನಸಿಕ, ದೈಹಿಕ ಹಿಂಸೆ ನೀಡುತ್ತಿದ್ದಾರೆ. ಪತಿ ನಾಗರಾಜ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ. ಪತಿ ನಿತ್ಯ ಹಿಂಸೆ ನೀಡುತ್ತಿದ್ದಾನೆ. ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ನನ್ನ ಮಗಳು ಬರೆದಿದ್ದಾಳೆ ಎಂದು ಆಶಾ ತಂದೆ ಬಸವರಾಜಪ್ಪ ದೂರು ದಾಖಲಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಗರಾಜ, ನಿಂಗಮ್ಮ, ಮಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.



