Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ತೀವ್ರತೆ ಕಡಿಮೆ; ರೈತರು ಆತಂಕ‌ಪಡುವ ಅಗತ್ಯವಿಲ್ಲ; ತೋಟಗಾರಿಕೆ ವಿಜ್ಞಾನಿ ಬಸವನಗೌಡ

IMG 20231004 164054

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ತೀವ್ರತೆ ಕಡಿಮೆ; ರೈತರು ಆತಂಕ‌ಪಡುವ ಅಗತ್ಯವಿಲ್ಲ; ತೋಟಗಾರಿಕೆ ವಿಜ್ಞಾನಿ ಬಸವನಗೌಡ

ದಾವಣಗೆರೆ: ಜಿಲ್ಲೆಯಲ್ಲಿ ಕಾಣಸಿಕೊಂಡಿರುವ ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದ ಬಗ್ಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ. ತಿಳಿಸಿದರು.

ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಇಲಾಖೆ, ದಾವಣಗೆರೆ ಹಾಗೂ ವಿದ್ಯಾನಗರ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ತಾಲ್ಲೂಕು ಬಸವನಾಳ್ ಗ್ರಾಮದಲ್ಲಿ ಹಮ್ಮಿಕೊಂಡ ತಿಂಗಳ ಹುರಳಿ ಬೆಳೆಯ ಕ್ಷೇತ್ರೋತ್ಸವ ಹಾಗೂ ಅಡಿಕೆ ಬೆಳೆಯ ಸಮಗ್ರ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಹಾಗೂ ವಾತಾವರಣದಲ್ಲಿ ಆದ್ರತೆ ಹೆಚ್ಚಿರುವ ಕಡೆ ಎಲೆ ಚುಕ್ಕೆಯ ಹಾನಿ ಪರಿಣಾಮಕಾರಿಯಾಗಿರುತ್ತದೆ. ನಮ್ಮ ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಕಡಿಮೆ ಹಾಗೂ ಶುಷ್ಕ ವಾತಾವರಣವಿದೆ. ಇಲ್ಲಿ ಇದರ ತೀವ್ರತೆ ಕಡಿಮೆ ಹಾಗಾಗಿ ರೈತರು ಆತಂಕಕ್ಕೆ ಒಳಗಾಗದೇ ಭಾದಿತ ತೋಟಗಳಲ್ಲಿ ಹೆಕ್ಸಾಕೊನೋಜೋಲ್ 1 ಮಿಲೀ / ಪ್ರತೀ ಲೀಟರ್ ನೀರಿಗೆ ಬೆರಸಿ ಸಿಂಪಡಿಸಬೇಕೆಂದು ಮಾಹಿತಿ ನೀಡಿದರು.

ಪ್ರಾತ್ಯಕ್ಷಿಕೆಗೆ ನೀಡಿದ ತಿಂಗಳ ಹುರುಳಿಯ ತಳಿ ‘ಅರ್ಕಾ ಅರ್ಜುನ್’ ನಾರು ರಹಿತವಾಗಿದ್ದು ಉತ್ತಮ ಇಳುವರಿ ಬಂದಿದೆ, ಜೊತೆಗೆ ಇದನ್ನು ಭೂಮಿಗೆ ಮುಗುಚುವುದರಿಂದ ಮಣ್ಣಿನ ಫಲವತ್ತತೆಯೂ ಹೆಚ್ಚುತ್ತದೆ ಎಂದು ತಿಳಿಸಿದರು.

ಮಣ್ಣು ಪರೀಕ್ಷೆಯ ಮಹತ್ವ, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿಯಂತ್ರಣ, ಅಂತರಬೆಳೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ವಿಜ್ಞಾನಿಗಳಾದ ಸಣ್ಣಗೌಡ್ರ ಹೆಚ್. ಎಂ. ಮತ್ತು ಡಾ. ಅವಿನಾಶ್ ಟಿ.ಜಿ. ರವರು ತಿಳಿಸಿದರು.

ವಿದ್ಯಾನಗರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ದೇವರಾಜ ಸಿ.ಹೆಚ್. ಮಾತನಾಡಿ ಭಾರತ ಕೃಷಿ ಪ್ರಧಾನವಾದ ದೇಶ, ಇಲ್ಲಿ ಕೃಷಿಕರು ವೈಜ್ಞಾನಿಕ ತಂತ್ರಜ್ಞಾನಗಳನ್ನು ಅಳವಡಿಸಿ ಕೃಷಿಯಲ್ಲಿ ಸುಸ್ಥಿರತೆಯನ್ನು ಕಾಣುತ್ತಿದ್ದಾರೆ. ನಮ್ಮ ಸಂಸ್ಥೆಯವತಿಯಿAದ ಮುಂದಿನ ದಿನದಲ್ಲಿ ಮಣ್ಣು ಪರೀಕ್ಷೆ ಆಂದೋಲನ ಹಾಗೂ ಆರೋಗ್ಯ ಶಿಬಿರಗಳನ್ನು ರೈತರಿಗೆ ಹಮ್ಮಿಕೊಳ್ಳುವ ಉದ್ದೇಶವಿದ್ದು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀಮತಿ ರೇಷ್ಮಾ ಪರ್ವಿನ್ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳು ಮೆಣಸು, ಕೋಕೋ, ಜಾಯಿಕಾಯಿ ಬೆಳೆಗಳನ್ನು ಬೆಳೆಯಲು ಅನುದಾನವಿದ್ದು ರೈತರು ಇದನ್ನು ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಿವಕುಮಾರ್, ದಿಳ್ಯೆಪ್ಪ ಮಾಸ್ಟರ್, ಹೆಚ್. ಎನ್. ಕುಮಾರ್, ಬೇತೂರು ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ ನಿರ್ದೇಶಕರಾದ ಬಸವರಾಜ್, ಪ್ರಗತಿಪರ ರೈತರಾದ ಪರಮೇಶ್ವರಯ್ಯ, ಐಗೂರು ಮಂಜುನಾಥ್, ಬಿ.ಸಿ. ಮರುಳಸಿದ್ದಯ್ಯ, ಮಹೇಶ್ವರಯ್ಯ ಹಾಗೂ 50 ಕ್ಕೂ ಹೆಚ್ಚು ರೈತರು ಹಾಜರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
lokayukta visit
Advertisement
Advertisement Enter ad code here

Title

To Top