ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ (pension) ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಲಾಗಿದೆ.
ದಾವಣಗೆರೆ: ವಿದ್ಯಾನಗರ ಮನೆವೊಂದರ ಕಳ್ಳತನ ಆರೋಪಿ ಪತ್ತೆ; 3.15 ಲಕ್ಷ ಮೌಲ್ಯದ ಸ್ವತ್ತು ವಶ
ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.