ದಾವಣಗೆರೆ: ಮಾ.20 ರಂದು ಚನ್ನಗಿರಿ ತಾಲ್ಲೂಕಿನ ಕಸಬಾ ಮಾವಿನಹೊಳೆ ಗ್ರಾಮದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ , ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಟಿ, ಬರ ಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ, ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹಾಗೂ ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಅಂದು ಇತ್ಯರ್ಥಪಡಿಸಲಾಗುವುದು.
ಉಳಿದ ತಾಲ್ಲೂಕುಗಳಾದ ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ಹಾಲೇಕಲ್ಲು ಗ್ರಾಮ, ದಾವಣಗೆರೆ ತಾಲ್ಲೂಕಿನ ಆನಗೋಡು ಹೋಬಳಿಯ ಕಂದನಕೋವಿ, ಹರಿಹರ ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಕಶೆಟ್ಟಿಹಳ್ಳಿ, ಹೊನ್ನಾಳಿ ತಾಲ್ಲೂಕಿನ ಸಾಸ್ವೇಹಳ್ಳಿ-1 ಹೋಬಳಿಯ ರಾಂಪುರ, ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿಯ ಮಾವಿನಹೊಳೆ ಗ್ರಾಮ ಹಾಗೂ ನ್ಯಾಮತಿಯ ಗೋವಿನಕೋವಿ-1 ಹೋಬಳಿಯ ಕಂಕನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



