ಅನಧಿಕೃತ ಸ್ವತ್ತುಗಳಿಗೆ ಇ-ಖಾತೆ; ಕೇವಲ ಮೂರು ತಿಂಗಳು ಅವಕಾಶ- ಈ ಸ್ಥಳದದಲ್ಲಿ ಅನಧಿಕೃತ ಕಟ್ಟಡವಿದ್ರೆ ಇ-ಸ್ವತ್ತುಗಳು ಸಿಗಲ್ಲ…!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲಾಗಿರುತ್ತದೆ. ಆಸ್ತಿ ಮಾಲೀಕರು ತಮ್ಮ ಅಸ್ತಿಗಳಿಗೆ ಈ ಕೆಳಕಂಡ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು.

ದಾವಣಗೆರೆ: ಅನಧಿಕೃತ ಬಡಾವಣೆಯ ಸೈಟ್, ಮನೆ, ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ಪಾಲಿಕೆ ಪಡೆಯುತ್ತಿದ್ದ 10 ಸಾವಿರ ಹೆಚ್ಚುವರಿ ಶುಲ್ಕ ರದ್ದು

ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದು. ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅಧಿಕೃತ ಆಸ್ತಿಗಳಿಗೆ ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ದಾವಣಗೆರೆ: ಕೊನೆ ಭಾಗಕ್ಕೆ ತಲುಪದ ಭದ್ರಾ ನಾಲೆ ನೀರು; ಅನಧಿಕೃತ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ -ಜಿಲ್ಲಾಧಿಕಾರಿ ಸೂಚನೆ

ಈ ದಾಖಲೆ ಅಗತ್ಯ: ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕ ಸಾಬೀತುಪಡಿಸುವ ಸೆಪ್ಟೆಂಬರ್ 10,2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಅಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಅನಧೀಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಫೆಬ್ರವರಿ 11 ರಿಂದ 3 ತಿಂಗಳ ಅವಧಿ ಇದೆ.ಅರ್ಜಿಯನ್ನು ಸಲ್ಲಿಸಿದ 7 ದಿನಗಳ ಒಳಾಗಾಗಿ ಇ-ಖಾತಾ ಪಡೆಯಬಹುದು.

ದಾವಣಗೆರೆ:ಕಳಪೆ, ಹಾಫ್ ಹೆಲ್ಮೆಟ್ ಮಾರಾಟ ಮಳಿಗೆಗಳ ಮೇಲೆ ದಾಳಿ; 1,500 ಹೆಲ್ಮೆಟ್ ವಶ

ಇ-ಖಾತಾ ಪಡೆಯಲು ಅವಕಾಶವಿಲ್ಲದಿರುವ ಸ್ವತ್ತುಗಳು: ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ, ಮಂಡಳಿಗಳ ಜಾಗಗಳು,ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿನ ಸ್ವತ್ತುಗಳು, ಹೆಚ್ಚಿನ ಮಾಹಿತಿಗಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಯಾ ಸ್ಥಳೀಯ ಸಂಸ್ಥೆಗಳ ಕಚೇರಿಯ ನೋಟೀಸ್ ನಲ್ಲಿ ಸಹಾಯವಾಣಿ ಸಂಖ್ಯೆ ಮತ್ತು ಅರ್ಜಿ ಸ್ವೀಕರಿಸಲು ನೇಮಿಸಿದ ಸಿಬ್ಬಂದಿಯ ಹೆಸರನ್ನು ನಮೂದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *