Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು; ಶಾಮನೂರು ಶಿವಶಂಕರಪ್ಪ ಆಗ್ರಹ

ದಾವಣಗೆರೆ

ವೀರಶೈವ ಲಿಂಗಾಯತರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು; ಶಾಮನೂರು ಶಿವಶಂಕರಪ್ಪ ಆಗ್ರಹ

ದಾವಣಗೆರೆ: ವೀರಶೈವ ಲಿಂಗಾಯತ ಎಲ್ಲಾ ಒಳಪಂಗಡವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.

ಹರಿಹರ ತಾಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಲ್ಲಿ ಇಂದು ನಡೆದ ಹರ ಜಾತ್ರೆಯಲ್ಲಿ ಮಾತನಾಡಿದ ಅವರು, ವೀರಶೈವರು ಹಾಗೂ ಲಿಂಗಾಯತರು ಬೇರೆ ಬೇರೆ ಅಲ್ಲ, ಎಲ್ಲರೂ ಒಂದೇ. ವೀರಶೈವ ಲಿಂಗಾಯತರು ಒಳಪಂಗಡಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಎಲ್ಲಾ ವೀರಶೈವ ಲಿಂಗಾಯತರು ಒಂದೇ ಎಂಬುದನ್ನು ತಿಳಿಯಬೇಕು ಎಂದರು.

ವೀರಶೈವ ಲಿಂಗಾಯತ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅನುಕೂಲ ಆಗುವ ದೃಷ್ಟಿಯಿಂದ ಸರ್ಕಾರ ಶಿಫಾರಸು ಮಾಡಲಿ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಇತ್ತೀಚೆಗೆ ಪಂಚಮಸಾಲಿ ಸಮುದಾಯ ಹೆಚ್ಚು ಬೆಳವಣಿಗೆ ಹೊಂದುತ್ತಿದ್ದು, ಸಂತಸದ ವಿಚಾರ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top