ಡಿವಿಜಿ ಸುದ್ದಿ, ದಾವಣಗೆರೆ: ಶ್ರೀರಾಮುಲು ಸಾಮಾಜಿಕ ನ್ಯಾಯದ ಪರವಾಗಿ ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಈಗ ಕೊಟ್ಟಿರುವ ಸಮಾಜ ಕಲ್ಯಾಣ ಖಾತೆಯನ್ನು ಸೂಕ್ತವಾಗಿ ನಿರ್ವಹಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ .ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಮುಖ್ಯಮಂತ್ರಿಗಳು ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಅನೇಕ ವರ್ಷಗಳಿಂದ ಶ್ರೀ ರಾಮುಲು ಹೋರಾಟ ಮಾಡುತ್ತಾ ಬಂದಿದ್ದಾರೆ. ಹೀಗಾಗಿ ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಾರೆ ಎಂದರು.
ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಬ್ಬರ ಬಳಿ ಇದ್ದರೆ ಸೂಕ್ತ. ಹೀಗಾಗಿ ಮುಖ್ಯಮಂತ್ರಿ ಅವರು ಈ ಬದಲಾವಣೆ ಮಾಡಿದ್ದಾರೆ ಎಂದರು.



