ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ವಾಗತ ಮಾಡಿದ್ರೂ ನಾವು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ.125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ. ಇದರ ಬಗ್ಗೆ ಬೇರೆ ಮಾತಿಲ್ಲ. ನಾವು ಬಿಜೆಪಿಯಲ್ಲೇ ಇರುತ್ತೇವೆ. ಇನ್ನು ಚುನಾವಣೆ ಹೇಗೆ ನಡೆಸಬೇಕು, ಯಾರಿಗೆ ಯಾವ ಉಸ್ತುವಾರಿ ಕೊಡಬೇಕು ಎಂಬುದು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.