ದಾವಣಗೆರೆ: ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್‌ನಿಂದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಗದಾಗಿ ವಿದ್ಯಾರ್ಥಿ ವೇತನ ವಿತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಸಿ.ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯದ ಮಕ್ಕಳಿಗೆ ಸಾರ್ವಜನಿಕವಾಗಿ ಕೊಡಮಾಡುವ ವಿದ್ಯಾರ್ಥಿ ವೇತನ ಶೇ.85 ರಷ್ಟು ಅಂಕ ಪಡೆದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಪ್ರಥಮ ಮತ್ತು ದ್ವಿತೀಯ ವರ್ಷದ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ವಿದಾರ್ಥಿ-ವಿದ್ಯಾರ್ಥಿನಿಯರು ಅಂಕಪಟ್ಟಿ
ಜೆರಾಕ್ಸ್‌ನೊಂದಿಗೆ ಕಾಲೇಜಿನ ಪ್ರವೇಶಕ್ಕೆ ಕಟ್ಟಿದ ಶುಲ್ಕದ ರಶೀದಿಯ ಜೆರಾಕ್ಸ್‌ನೊಂದಿಗೆ ಅರ್ಜಿ ಸಲ್ಲಿಸಬೇಕು.
ವಿವರಕ್ಕೆ ಸಿ.ಆರ್. ವಿರೂಪಾಕ್ಷಪ್ಪ ಅಧ್ಯಕ್ಷರು, ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್, ಚನ್ನಗಿರಿ ರಂಗಪ್ಪ ಗಡಿಯಾರ ಕಂಬದ ಎದುರು, ರೈಲ್ವೆ ಸ್ಟೇಷನ್ ರಸ್ತೆ, ದಾವಣಗೆರೆ-577001 ಇಲ್ಲಿಗೆ ಜುಲೈ 1 ರಿಂದ 10 ರೊಳಗೆ ಸಂಪರ್ಕಿಸಬಹುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಭರತ್ ಚನ್ನಗಿರಿ ತಿಳಿಸಿದ್ದಾರೆ. ವಿದ್ಯಾರ್ಥಿ ವೇತನ ಕೂಪನ್ ಕಚೇರಿಗೆ ತಲುಪಿಸುವ ಕೊನೆಯ
ದಿನಾಂಕ 31-07-2023.



