ದಾವಣಗೆರೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ನಾನೇ ಸಿಎಂ ಅಭ್ಯರ್ಥಿ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಜನ ಬಿಜೆಪಿ ಮೇಲೆ ಬೇಸರಗೊಂಡಿದ್ದಾರೆ. ಬಿಜೆಪಿ ಆಡಳಿತದ ಬಗ್ಗೆ ಜನರಿಗೆ ಸಮಾಧಾನ ಇಲ್ಲ. ಇದೇ ಕಾರಣಕ್ಕೆ ಕಾಂಗ್ರೆಸ್ ಗೆಲ್ಲಿಸಲಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲಿಲ್ಲಿದ್ದಾರೆ ಎಂದು ಶಾಮನೂರ ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.