Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಅಗ್ನಿಶಾಮ ದಳಕ್ಕೆ 1 ಕೋಟಿ ಮೊತ್ತದ ಸ್ಮಾರ್ಟ್ ಕಿಟ್..!

ದಾವಣಗೆರೆ

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಅಗ್ನಿಶಾಮ ದಳಕ್ಕೆ 1 ಕೋಟಿ ಮೊತ್ತದ ಸ್ಮಾರ್ಟ್ ಕಿಟ್..!

ದಾವಣಗೆರೆ : ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆ ಅಗ್ನಿಶಾಮಕ ಇಲಾಖೆಗೆ 01 ಕೋಟಿ ರೂ. ಮೊತ್ತದಲ್ಲಿ ವಾಹನ, ಆಧುನಿಕ ವಿವಿಧ ಸಾಧನ, ಸಲಕರಣೆಗಳನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಅವರು ಅಗ್ನಿಶಾಮಕ ಇಲಾಖೆ ಅಧಿಕಾರಿಗಳಿಗೆ ಶುಕ್ರವಾರ ಜಿಲ್ಲಾಡಳಿತ ಭವನ ಆವರಣದಲ್ಲಿ ಹಸ್ತಾಂತರ ಮಾಡಿದರು.

ಅಗ್ನಿ ಅವಘಡಗಳು, ಕಟ್ಟಡಗಳ ಕುಸಿತ, ವಾಹನಗಳ ಅಪಘಾತ ಮುಂತಾದ ಸಂದರ್ಭಗಳಲ್ಲಿ ಅಗ್ನಿಶಾಮಕ ಇಲಾಖೆಗೆ ತುರ್ತು ಅಗತ್ಯವಿರುವ ವಾಹನ, ಸಾಧನ, ಸಲಕರಣೆಗಳನ್ನು ಖರೀದಿಸಲು ಸ್ಮಾರ್ಟ್ ಸಿಟಿ ಯೋಜನೆಯಡಿ 01 ಕೋಟಿ ರೂ. ಅನುದಾನ ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಬಳಸುವ ಸಲುವಾಗಿ ಬೊಲೆರೋ ಜೀಪ್-01, ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೆಳೆದು ಹರಿಸಲು ಪೋರ್ಟಬಲ್ ಪಂಪ್-04,
ಆಪರೇಟರ್ ರೋಟರಿ, ಫ್ಲಾಷ್ ಲೈಟ್ ಟಾರ್ಚ್‍ಗಳು, ಫೈರ್ ಬೀಟರ್‍ಗಳು, ಹೈಪೋ ಕಟಿಂಗ್ ಯಂತ್ರವನ್ನು ಖರೀದಿಸಿ ಅಗ್ನಿಶಾಮಕ ಇಲಾಖೆಗೆ ಪೂರೈಸಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಮಾಹಿತಿ ನೀಡಿದರು.

ಸಾಧನ, ಸಲಕರಣೆಗಳನ್ನು ಹಸ್ತಾಂತರಗೊಳಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಮಾತನಾಡಿ, ಯಾವುದೇ ಅನಾಹುತ ಜರುಗಿದ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಗ್ನಿಶಾಮಕ ಇಲಾಖೆ ಸ್ಪಂದಿಸಬೇಕು. ಅತ್ಯಾಧುನಿಕ ಸಾಧನ ಸಲಕರಣೆಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಆಸ್ತಿ ಹಾನಿ, ಜೀವ ಹಾನಿಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಮೂಲಕ ಸಾರ್ವಜನಿಕ ರಕ್ಷಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ ಬಿ.ಜಿ. ಅಜಯ್‍ಕುಮಾರ್, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top