ನಾಯಕನಹಟ್ಟಿ: ರಾಜಕೀಯದಿಂದ ನಿವೃತ್ತಿ ಇಲ್ಲ, ಈ ಬಾರಿಯೂ ದಾವಣಗೆರೆ ದಕ್ಷಿಣದಿಂದ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. ನನಗೆ ಅಂತಹ ಚಿಂತನೆ ಇಲ್ಲ.1994ರಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪ ರ್ಧಿಸುತ್ತಿದ್ದೇನೆ. ಈ ಬಾರಿಯೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದು, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಟಿಕೆಟ್ ಘೋಷಣೆ ನಂತರ ಚುನಾವಣೆಗೆ ಸಿದ್ಧತೆ ಆರಂಭಿಸುತ್ತೇನೆ. ಇದು ನನಗೆ ಆರನೇ ಚುನಾವಣೆಯಾಗಿದ್ದು ಮತ್ತೂಮ್ಮೆ ಗೆಲ್ಲುವ ವಿಶ್ವಾಸವಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಸಮಸ್ಯೆಯಿಲ್ಲ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಲಂಚದ ವಿಷಯಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್‌ಗೆ ಇದರಿಂದ ಅನುಕೂಲವಾಗಲಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುವುದು ಶತಃಸಿದ್ಧ. ಉಪ್ಪು ತಿಂದವ ನೀರು ಕುಡಿಯಬೇಕು ಎನ್ನುವ ಗಾದೆಯಂತೆ ಮಾಡಾಳು ವಿರೂಪಾಕ್ಷಪ್ಪ ಅಪರಾಧ ಮಾಡಿದ್ದರೆ ಶಿಕ್ಷೆ ಆಗಲೇಬೇಕು ಎಂದರು.



