Connect with us

Dvgsuddi Kannada | online news portal | Kannada news online

ದಾವಣಗೆರೆ: ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

tabale tennis

ದಾವಣಗೆರೆ

ದಾವಣಗೆರೆ: ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

ದಾವಣಗೆರೆ: ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ.

ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಮತ್ತು ತಂಡದ ಆಯ್ಕೆಯನ್ನು ಬುಧವಾರ ನಡೆಸಲಾಯಿತು.

ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಪ್ರಥಮ ಸ್ಥಾನ ಪಡೆದುಕೊಂಡಿತು, ಎ ಜಿ ಬಿ ಕಾಲೇಜು ದ್ವಿತೀಯ, ಡಿ ಆರ್ ಎಮ್ ಸೈನ್ಸ್ ಕಾಲೇಜು ತೃತೀಯ, ಹಾಗೂ ಎಚ್ ಐ ಎಚ್ ಇ ಕಾಲೇಜು ನಾಲ್ಕನೆ ಸ್ಥಾನ ಪಡೆದುಕೊಂಡಿತು.

ಮಹಿಳಾ ಪಂದ್ಯದಲ್ಲಿ ಪ್ರಥಮ ಸ್ಥಾನ ಎಚ್ ಐ ಎಚ್ ಇ ಕಾಲೇಜು ಪಡೆದುಕೊಂಡಿತು, ದ್ವಿತೀಯ-ಎ ವಿ ಕೆ ಕಾಲೇಜು, ತೃತೀಯ-ಎ ಜಿ ಬಿ ಕಾಲೇಜು, ಹಾಗೂ ನಾಲ್ಕನೆ ಸ್ಥಾನವನ್ನು ಎಸ್ ಬಿ ಸಿ ಕಾಲೇಜು ಪಡೆದುಕೊಂಡಿತು. ಪ್ರಾಂಶುಪಾಲ ಡಾ. ಸಾಹೀರಾಭಾನು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ವೀರೇಂದ್ರ, ಪ್ರೊ. ಭೀಮಣ್ಣ ಸುಣಗಾರ್, ಡಾ. ಎಮ್. ಮಂಜಣ್ಣ, ಡಾ. ಪ್ರವೀಣ್. ಆನಂದಕಂದ, ಡಾ. ನಿವೇದಿತಾ ಡಾ. ಯಶೋದಾ, ಡಾ. ಸದಾಶಿವ, ಕಚೇರಿಯ ಪತ್ರಾಂಕಿತ ವ್ಯವಸ್ಥಾಪಾಕರುಗಳಾದ ಜಗದೀಶ್ ನಾಯ್ಕ್, ಗೀತಾ ದೇವಿ, ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top