Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂನ್ 30ರೊಳಗೆ 82 ಲಕ್ಷ ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ: ಸಂಸದ

ದಾವಣಗೆರೆ

ದಾವಣಗೆರೆ: ಜೂನ್ 30ರೊಳಗೆ 82 ಲಕ್ಷ ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ: ಸಂಸದ

ದಾವಣಗೆರೆ: ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂ.34 ಕೋಟಿ ವೆಚ್ಚದಲ್ಲಿ ರಾಜ್ಯದ 28 ಕಡೆ ಆಕ್ಸಿಜನ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು

ದಾವಣಗೆರೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೂ. 82 ಲಕ್ಷ ವೆಚ್ಚದಲ್ಲಿ 1000 ಲೀಟರ್ ಪರ್ ಮಿನಿಟ್ ಸಾಮರ್ಥ್ಯದ ಘಟಕ ನಿರ್ಮಾಣವಾಗಲಿದೆ. ಕೇಂದ್ರ ಸರ್ಕಾರದ ಸ್ವಾಮ್ಯದ ಉದ್ಯಮಗಳಾದ ಓ.ಎನ್.ಜಿ.ಸಿ ಹಾಗೂ ಎಂ.ಆರ್.ಪಿ.ಎಲ್. ಕಂಪನಿಗಳಿಗೆ ಘಟಕ ಸ್ಥಾಪನ ಹೊಣೆ ನೀಡಲಾಗಿದೆ. ಜೂನ್ 30 ರ ಒಳಗೆ ಎಲ್ಲಾ ಘಟಕಗಳು ಕಾರ್ಯಾರಂಭ ಮಾಡಲಿವೆ ಎಂದರು.

ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಅನುಮೋದನೆ ನೀಡಿದ ಮಾನ್ಯ ಪ್ರಧಾನಮಂತ್ರಿಗಳಿಗೆ, ಇಂಧನ ಸಚಿವರಾದ ಧರ್ಮೇಂದ್ರ ಪ್ರಧಾನ್ ರವರಿಗೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಷಿಯವರಿಗೆ ಸಮಸ್ತ ಜನತೆಯ ಪರವಾಗಿ ಅಭಿನಂದನೆಗಳು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top