ದಾವಣಗೆರೆ: ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಮೇಯರ್ ಎಸ್.ಟಿ. ವೀರೇಶ್ ಹೇಳಿದರು.
ಪೌರಕಾರ್ಮಿಕರ ಸಮಸ್ಯೆ ಆಲಿಸಿದ ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಿಮ್ಮೆಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು. ನಿಮ್ಮ ಸುರಕ್ಷತೆಗೆ ಮೊದಲ ಆದ್ಯತೆಗೆ ನೀಡಲಾಗುವುದು. ಕೈಗೆ ಗ್ಲೌಸ್, ಮಾಸ್ಕ್ ಒಂದು ವಾರದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.
ಪೌರ ಕಾರ್ಮಿಕರಿಗೆ ಆಧುನಿಕ ಸೌಲಭ್ಯ ಒದಗಿಸಬೇಕು, ಸಂಬಳ ನೇರಪಾವತಿಸಬೇಕು, ಮನೆ ಇಲ್ಲದವರಿಗೆ ಮನೆ ಒದಗಿಸಬೇಕು ಹಾಗೂ ಬೆಳಗ್ಗೆ ಉಪಹಾರದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಪೌರ ಕಾರ್ಮಿಕರು ಮನವಿ ಮಾಡಿದರು.



