ದಾವಣಗೆರೆ: ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕೆಇಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು. ಕೊರೊನಾ ಸಂಕಷ್ಟದಲ್ಲಿಯೂ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ. ಇದರಿಂದ ಜನ ಸಾಮಾನ್ಯರು ಜೀವನ ಮಾಡುವುದು ಕಷ್ಟವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ಕೊರೊನಾದಂತಹ ಸಂಕಷ್ಟದ ಸ್ಥಿತಿಯಲ್ಲಿಯೂ ಸರ್ಕಾರ ಪ್ರತಿ ಯೂನಿಟ್ ವಿದ್ಯತ್ ದರ 40 ಪೈಸೆ ಹೆಚ್ಚಿರುವುದು ಖಂಡನೀಯ. ಸರ್ಕಾರದ ಈ ನಿರ್ಧಾರ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಗ್ರಾಹಕರಿಂದ ಒಂದು ಸಾವಿರ ರೂಪಾಯಿ ಠೇವಣಿ ಸಂಗ್ರಕ್ಕೆ ಮುಂದಾಗಿರುವುದು ಖಂಡನೀಯ. ತಕ್ಷಣವೇ ಠೇವಣಿ ಸಂಗ್ರಹ ಕಾರ್ಯವನ್ನು ನಿಲ್ಲಿಸಬೇಕು ಜತೆಗೆ ದರ ಏರಿಕೆ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿ.ಪಂ ಸದಸ್ಯ ಕೆ.ಎಚ್. ಓಬಳಪ್ಪ, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯ ಚಮನ್ ಸಾಬ್, ಅಯೂಬ್ ಪೈಲ್ವಾನ್, ಅನಿತಾಬಾಯಿ ಮಾಲತೇಶ್, ಶುಭಮಂಗಳ, ಡೋಲಿ ಚಂದ್ರ, ಜಿ. ರಾಕೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



