Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಮುಖ ಸುದ್ದಿ

ದಾವಣಗೆರೆ: ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್  ನಿಂದ  ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಕೆಇಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು. ಕೊರೊನಾ ಸಂಕಷ್ಟದಲ್ಲಿಯೂ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ. ಇದರಿಂದ ಜನ ಸಾಮಾನ್ಯರು ಜೀವನ ಮಾಡುವುದು ಕಷ್ಟವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ,  ಕೊರೊನಾದಂತಹ ಸಂಕಷ್ಟದ ಸ್ಥಿತಿಯಲ್ಲಿಯೂ ಸರ್ಕಾರ ಪ್ರತಿ ಯೂನಿಟ್ ವಿದ್ಯತ್ ದರ 40 ಪೈಸೆ ಹೆಚ್ಚಿರುವುದು ಖಂಡನೀಯ.  ಸರ್ಕಾರದ ಈ ನಿರ್ಧಾರ ಜನ ಸಾಮಾನ್ಯರಿಗೆ  ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಗ್ರಾಹಕರಿಂದ ಒಂದು  ಸಾವಿರ ರೂಪಾಯಿ  ಠೇವಣಿ ಸಂಗ್ರಕ್ಕೆ ಮುಂದಾಗಿರುವುದು  ಖಂಡನೀಯ.  ತಕ್ಷಣವೇ ಠೇವಣಿ ಸಂಗ್ರಹ ಕಾರ್ಯವನ್ನು ನಿಲ್ಲಿಸಬೇಕು ಜತೆಗೆ ದರ ಏರಿಕೆ ನಿರ್ಧಾರವನ್ನು ವಾಪಸ್ ಪಡೆಯಬೇಕು  ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿ.ಪಂ ಸದಸ್ಯ ಕೆ.ಎಚ್. ಓಬಳಪ್ಪ,  ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್,  ಪಾಲಿಕೆ ಸದಸ್ಯ ಚಮನ್ ಸಾಬ್, ಅಯೂಬ್ ಪೈಲ್ವಾನ್, ಅನಿತಾಬಾಯಿ ಮಾಲತೇಶ್, ಶುಭಮಂಗಳ, ಡೋಲಿ ಚಂದ್ರ, ಜಿ. ರಾಕೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top