ದಾವಣಗೆರೆ: ದಾವಣಗೆರೆ ವಿದ್ಯುತ್ ಚಾಲಿತ ಸುಮಾರು 50 ರಿಂದ 100 ಹೊಸ ಎಲೆಕ್ಟ್ರಿಕಲ್ ಬಸ್ಸುಗಳು ಬರಲಿದ್ದು, ಇವುಗಳನ್ನು ನಗರ ಮತ್ತು ಹರಿಹರದ ನಡುವಿನ ಸಂಚಾರಕ್ಕೆ ಬಳಸಲಾಗುವುದು ಎಂದು ಜಿಲ್ಲಾಧಿಕಾರಿಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಪ್ರೀಪೇಯ್ಡ್ ಆಟೋ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಲ್ಲಿ ಮಾಹಿತಿ ನೀಡಿದರು.ನಗರದಲ್ಲಿ ಪ್ರೀಪೇಯ್ಡ್ ಆಟೋ ರಿಕ್ಷಾ ವ್ಯವಸ್ಥೆ ಯಶಸ್ವಿಯಾಗುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಇನ್ನು ನಾಲ್ಕು ಕಡೆಗಳಲ್ಲಿ ಇಂತಹ ನಿಲ್ದಾಣಗಳನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾವಣಗೆರೆ: ತಪ್ಪು ಮಾಡಿದ್ರೆ ಕಾನೂನು ಕ್ರಮಕ್ಕೆ ಸಿದ್ಧ; ದಾದಾಗಿರಿಗೆ ಬಗ್ಗುವುದಿಲ್ಲ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ಸಂಚಾರ ನಿಯಮಗಳ ಪಾಲನೆ: ಆಟೋ ರಿಕ್ಷಾಗಳಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚು ಜನರನ್ನು ತುಂಬುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್‍ಐಆರ್ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿ ದ್ವಿಚಕ್ರ ವಾಹನ ಸವಾರರು ಮತ್ತು ಎಲೆಕ್ಟ್ರಿಕ್ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಅವರು ಒತ್ತಿ ಹೇಳಿದರು.
ನಗರದ ಸ್ವಚ್ಛತೆ ಮತ್ತು ಸಿಸಿಟಿವಿ ಅಳವಡಿಕೆ: ದಾವಣಗೆರೆ ನಗರದ ಪ್ರವೇಶ ದ್ವಾರಗಳಲ್ಲಿ ಕಸ ಸುರಿಯುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಮತ್ತು ನಗರದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.



